ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ನಾಯಕರ ಪ್ರತಿಭಟನೆಗೆ ಅತಿಥಿ ಸತ್ಕಾರ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು, ಕಾರ್ಯಕರ್ತರು ಮುಂದಾಗಿದ್ದಾರೆ.
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ನಿವಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಐವಾನ್-ಇ-ಶಾಹಿ ಬಳಿ ಇರುವ ಸಚಿವ ಪ್ರಿಯಾಂಕ್ ಖರ್ಗೆ ನಿವಾಸದ ಬಳಿ ಖರ್ಗೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪ್ರತಿಭಟನಾಕಾರರಿಗಾಗಿ ಟೀ, ಕಾಫಿ, ಎಳನೀರು, ಮಜ್ಜಿಗೆ, ನೀರಿನ ವ್ಯವಸ್ಥೆ ಮಾಡಿದ್ದಾರೆ. ಕುರ್ಚಿ ಟೇಬಲ್ ಹಾಗಿ ಅತಿಥಿ ಸತ್ಕಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಈ ಮುಲಕ ಬಿಜೆಪಿ ಪ್ರತಿಭಟನೆಗೆ ಪರೋಕ್ಷ ಕೌಂಟರ್ ನಿದಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ಒಟ್ಟಾರೆ ಬಿಜೆಪಿ ಕಲಬುರಗಿ ಪ್ರತಿಭಟನೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ವೇಳೆ ಹೈಡ್ರಾಮಾ ನಡೆಯುವ ಸಾಧ್ಯತೆ ದಟ್ಟವಾಗಿದೆ.