alex Certify BIG NEWS: ಬಿಜೆಪಿ ಹಾಕಿರುವ ಸ್ಕ್ರಿಪ್ಟಿಗೆ ನಾವು ನಟನೆ ಮಾಡಲು ಆಗಲ್ಲ; ಜೀವ ಹೋಗಿದೆ, ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಹಾಕಿರುವ ಸ್ಕ್ರಿಪ್ಟಿಗೆ ನಾವು ನಟನೆ ಮಾಡಲು ಆಗಲ್ಲ; ಜೀವ ಹೋಗಿದೆ, ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ಪ್ರತಿಭಟನೆಗೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಚಿನ್ ಕುಟುಂಬದವರದ ಜೊತೆ ನಾನು ಮಾತನಾಡಿ ಭರವಸೆ ನೀಡಿದ್ದೇನೆ. ಪ್ರಕರಣ ಸಿಐಡಿ ತನಿಖೆಗೆ ನೀದಲಾಗಿದೆ. ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ. ಬಿಜೆಪಿಯವರಿಗೆ ಈಗ ಸಿಬಿಐ ಮೇಲೆ ಯಾಕೆ ಪ್ರೀತಿ ಬಂದಿದೆ ಎಂದು ಪ್ರಶ್ನಿಸಿದರು.

ರಾಜಕೀಯ ದುರುದ್ದೇಶಕ್ಕೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಹಾಕಿರುವ ಸ್ಕ್ರಿಪ್ಟ್ ಗೆ ನಾವು ನಟನೆ ಮಾಡಲು ಆಗಲ್ಲ. ಜೀವ ಹೋಗಿದೆ, ನ್ಯಾಯ ಕೊಡಿಸುವುದು ನಮ್ಮ ಜಬ್ದಾರಿ. ಇದರಲ್ಲಿ ರಾಜಕೀಯ ಬೆರೆಸುತ್ತಿರುವುದು ತಪ್ಪಲ್ಲವೇ? ಎಂದು ಗುಡುಗಿದರು.

ಬಿಜೆಪಿ ಸಂಸ್ಕೃತಿ ಏನೆಂಬುದು ರಾಜ್ಯದಲ್ಲಿ ಅನಾವರಣವಾಗುತ್ತಿದೆ. ಅಪ್ರಾಪ್ತ ಬಾಲಕರಿಗೆ ಹಿಂಸೆ ನೀಡುವುದು, ಮಹಿಳೆಯರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವುದು. ಆಕ್ಷೇಪಾರ್ಹ ಹೇಳಿಕೆಗಳನ್ನು ನೀದುವುದು. ಪೊಲೀಸರ ಮೇಲೆಯೇ ದಬ್ಬಾಳಿಕೆ ನಡೆಸುವುದು ಇದು ಬಿಜೆಪಿ ಸಂಸ್ಕೃತಿ. ಮಾಜಿ ಡಿಸಿಎಂ ಆಗಿದ್ದವರು, ವಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯಕ್ಕಾಗಿ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವ ಮೊದಲು ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...