ಮಂಗಳೂರು: ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಎಂದು ಹೇಳಿಕೊಂಡು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಖದೀಮರ ಗುಂಪು 30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಬಳಿಯ ನಾರ್ಶ ಎಂಬಲ್ಲಿ ನಡೆದಿದೆ.
ಕಳೆದ ರಾತ್ರಿ ತಮಿಳುನಾಡು ಮೂಲದ ಗ್ಯಾಂಗ್ ಕಾರಿನಲ್ಲಿ ಬಂದು ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ಸುಲೈಮಾನ್ ಹಾಜಿ ಎಂಬ ಉದ್ಯಮಿ ಮನೆ ಮೇಲೆ ದಾಳಿ ನಡೆಸಿದೆ. ತಡರಾತ್ರಿ ಕಳ್ಳರ ಗುಂಪು ಅಧಿಕಾರಿಗಳು ಎಂದು ನಂಬಿಸಿ ಸುಲೈಮಾನ್ ಅವರ ಮನೆಯನ್ನೆಲ್ಲ ಪರಿಶೀಲನೆ ನಡೆಸಿದೆ. ಬಳಿಕ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಹಣ ದೋಚಿ ಎಸ್ಕೇಪ್ ಆಗಿದ್ದಾರೆ.
ಅನುಮಾನಗೊಂಡ ಉದ್ಯಮಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಶ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.