HomeKarnatakaBREAKING NEWS: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ: 7 ಮಕ್ಕಳಿಗೆ ಗಂಭೀರ ಗಾಯ

BREAKING NEWS: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ: 7 ಮಕ್ಕಳಿಗೆ ಗಂಭೀರ ಗಾಯ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದು ಬಿದ್ದು 7 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಮಕ್ಕಳು ಅಂಗನವಾಡಿಗೆ ಆಗಮಿಸಿ ಕೊಠಡಿಯಲ್ಲಿ ಪಾಠ ಕೇಳಲು ಕುಳಿತಿದ್ದರು. ಈ ವೇಳೆ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಪೀಸ್ ಪೀಸ್ ಆಗಿ ಉದುರಿ ಬಿದ್ದಿದ್ದು, ಘಟನೆಯಲ್ಲಿ 7 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಕ್ಕಳ ತಲೆ, ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಪೆ ಕಾಮಗಾರಿಯೇ ಘಟನೆಗೆ ಕಾರಣ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular