ಬೆಂಗಳೂರು: ನಿರ್ಮಾಣ ಹಂತದ ಅನಧಿಕೃತ ಕಟ್ಟಡಗಳ ತೆರವಿಗೆ ಮುಂದಾಗಿರುವ ಬಿಬಿಎಂಪಿ, ಕಟ್ಟಡ ಮಾಲೀಕರಿಗೆ ಖಡಕ್ ಸೂಚನೆ ನೀಡಿದೆ.
ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಬಿಬಿಎಂಪಿ, ಬೆಂಗಳೂರು ನಗರದಲ್ಲಿರುವ ಅನಧಿಕೃತ ಕಟ್ಟಡಗಳ ಸರ್ವೆ ಮಾಡಿದೆ. 2000 ನಿರ್ಮಾಣ ಹಂತದ ಅನಧಿಕೃತ ಕಟ್ಟಗಳಿರುವ ಬಗ್ಗೆ ಪಟ್ಟಿ ಮಾಡಿದೆ. ನಿರ್ಮಾಣ ಹಂತದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಮಾಲೀಕರಿಗೆ ಸೂಚನೆ ನೀಡಿದೆ.
ಈಗಾಗಲೇ ಅನಧಿಕೃತ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿರುವ ಕಟ್ಟಡಗಳಿಗೆ ಬ್ಯಾನರ್ ಅಂಟಿಸಿರುವ ಬಿಬಿಎಂಪಿ ಇಂತಹ ಕಟ್ಟಡಗಳನ್ನು ಒಂದು ವಾರದೊಳಗೆ ತೆರವು ಮಾಡುವಂತೆ ಸೂಚಿಸಿದೆ. ಒಂದೊಮ್ಮೆ ವಾರದೊಳಗೆ ಕಟ್ಟಡ ಮಾಲೀಕರು ತೆರವು ಮಾಡದಿದ್ದರೆ ಖುದ್ದು ಬಿಬಿಎಂಪಿಯೇ ತೆರವು ಕಾರ್ಯಾಚರಣೆ ಮಾಡಲಿದೆ ಎಂದು ತಿಳಿಸಿದೆ.