ಬೆಂಗಳೂರು: ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನದಿಸಿದ್ದಾರೆ. ಬಸ್ ನಲ್ಲಿ 45 ಜನ ಪ್ರಯಣಿಕರಿದ್ದರು. ಸದ್ಯ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಮತ್ತೊಂದು ಬಸ್ ವ್ಯವಸ್ಥೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.