ಚಿಕ್ಕಬಳ್ಳಾಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರು ತಿಂಗಳಲ್ಲಿ ಸಿಎಂ ಚಾನ್ಸ್ ಇದೆ ಎಂದು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೆ ಆರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವಿದೆ. ಹೀಗಾಗಿಯೇ ಡಿ.ಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವ ಬಗ್ಗೆ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಇದು ಗುಂಪುಗಾರಿಕೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ರಾಜಕೀಯದಲ್ಲಿ ಯಾವುದೇ ಪಕ್ಷದಲ್ಲಿ ಗುಂಪು ಇಲ್ಲ ಎಂದು ಹೇಳುವುದು ಸುಳ್ಳಾಗುತ್ತದೆ. ಇನ್ನಾರು ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುವ ಸಮಯ ಸಮೀಪಿಸುತ್ತಿದೆ. ಹೀಗಾಗಿ ಸಿಎಂ ಡಿನ್ನರ್ ಮೀಟಿಂಗ್ ಮಾಡಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ.