alex Certify ಇಂದು ಸಿಎಂ ಸಿದ್ಧರಾಮಯ್ಯರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಿಎಂ ಸಿದ್ಧರಾಮಯ್ಯರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ

ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಬಾಪೂಜಿ ಎಂಬಿಎ ಮೈದಾನದಲ್ಲಿ ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ ಯುವಜನೋತ್ಸವದ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಜನವರಿ 5 ರಂದು ಬೆಳಗ್ಗೆ 10.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.

ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉಪಸ್ಥಿತರಿರುವರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ವಿವಿಧ ಸ್ಪರ್ಧೆಗಳಿಗೆ ಚಾಲನೆ: ವೇದಿಕೆ-1ರಲ್ಲಿ ನಗರದ ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕೃತಿಕ ಸಭಾಂಗಣದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಜಾನಪದ ನೃತ್ಯಕ್ಕೆ ಚಾಲನೆ ನೀಡುವರು.

ವೇದಿಕೆ-2ರ ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣದಲ್ಲಿ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ಜಾನಪದ ಗೀತೆಗೆ ಚಾಲನೆ ನೀಡುವರು.

ವೇದಿಕೆ-3ರ ಎಸ್ ಎಸ್ ನ್ಯಾಷನಲ್ ಪಬ್ಲಿಕ್ ಶಾಲೆ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಚಾಲನೆ ನೀಡುವರು.

ವೇದಿಕೆ-4ರಲ್ಲಿ ಬಾಪೂಜಿ ಎಂ.ಬಿ.ಎ ಕಾಲೇಜು ಕೊಠಡಿ ಸಂಖ್ಯೆ-1ರಲ್ಲಿ ಹೊನ್ನಾಳಿ ಕ್ಷೇತ್ರದ ಶಾಸಕ ಡಿ.ಜಿ.ಶಾಂತನಗೌಡ ಕವನ ರಚನೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ವೇದಿಕೆ-5ರಲ್ಲಿ ಬಾಪೂಜಿ ಎಂ.ಬಿ.ಎ ಕಾಲೇಜು ಕೊಠಡಿ ಸಂಖ್ಯೆ-2ರಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್ ಬಸವಂತಪ್ಪ ಕಥೆ ಬರೆಯುವ ಸ್ಪರ್ಧೆಗೆ ಚಾಲನೆ ನೀಡುವರು.

ವೇದಿಕೆ-6ರಲ್ಲಿ ದೃಶ್ಯಕಲಾ ಮಹಾವಿದ್ಯಾಲಯ, ಡೆಂಟಲ್ ಕಾಲೇಜು ರಸ್ತೆ, ತರಳಬಾಳು ಶಾಲೆ ಎದುರು ಇಲ್ಲಿ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜು.ವಿ.ಶಿವಗಂಗಾ ಚಿತ್ರಕಲೆ ಸ್ಪರ್ಧೆಗೆ ಚಾಲನೆ ನೀಡುವರು.

ವೇದಿಕೆ-7ರಲ್ಲಿ ದೃಶ್ಯಕಲಾ ಮಹಾವಿದ್ಯಾಲಯ, ಡೆಂಟಲ್ ಕಾಲೇಜು ರಸ್ತೆ, ತರಳಬಾಳು ಶಾಲೆ ಎದುರು ಇಲ್ಲಿ ಹರಿಹರ ಕ್ಷೇತ್ರದ ಶಾಸಕ ಬಿ.ಪಿ.ಹರೀಶ್ ಘೋಷಣೆ ಸ್ಪರ್ಧೆಗೆ ಚಾಲನೆ ನೀಡುವರು.

ರಾತ್ರಿ 8 ಗಂಟೆಗೆ ಎಂ.ಬಿ.ಎ ಕಾಲೇಜು ಮೈದಾನದ ಪ್ರಧಾನ ವೇದಿಕೆಯಲ್ಲಿ ಕದ್ರಿ ಮಣಿಕಾಂತ್ ಸಂಗೀತ ಸಂಜೆ(ಕಾನ್ಸರ್ಟ್), ಸವಾರಿ, ಸವಾರಿ 2, ಪೃಥ್ವಿ ಖ್ಯಾತಿಯ ಸಂಗೀತ ನಿರ್ದೇಶಕ, ಗಾಯಕ ಕದ್ರಿ ಮಣಿಕಾಂತ್ ಹಾಗೂ ಬಾಲಿವುಡ್ ಗಾಯಕಿ ಹಂಸಿಕಾ ಐಯ್ಯರ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು.

ರಾಜ್ಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭ: ಜನವರಿ 6 ರಂದು ಸಂಜೆ 4 ಗಂಟೆಗೆ ನಗರದ ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕೃತಿಕ ಸಭಾಂಗಣದಲ್ಲಿ ರಾಜ್ಯಮಟ್ಟದ ಯುವಜನೋತ್ಸವ-2025ರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...