ಬೆಂಗಳೂರು: ಮುಂದಿನ ಒಂದು ವಾರ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಸರಾಸರಿಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗುತ್ತದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಬಾರಿ ಶೀತ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತ ಗಾಳಿಯ ಪ್ರಭಾವದಿಂದಾಗಿ ತಾಪಮಾನ ಸಾಕಷ್ಟು ಕಡಿಮೆಯಾಗುತ್ತದೆ. ಜನವರಿ ತಿಂಗಳ ಸರಾಸರಿ ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್ ನಷ್ಟು ಇರುತ್ತದೆ. ಮುಂದಿನ ವಾರದಲ್ಲಿ ಕನಿಷ್ಠ ತಾಪಮಾನ 10ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗುತ್ತದೆ.
ಇನ್ನು ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ ಶೀತ ಮಾರುತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಭಾರಿ ಮಂಜಿನ ಕಾರಣ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.