ಬೆಂಗಳೂರು: ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ಳಲು ಸಿದ್ಧವಾಗಿದ್ದಾರೆ ಎಂದು ಕೇಳಿ ಬರುತ್ತಿರುವ ಸುದ್ದಿ ಸುಳ್ಳಾಗಿದೆ. ಅಂತಹ ಯಾವುದೇ ನಿರ್ಧಾರವನ್ನು ದರ್ಶನ್ ಇನ್ನೂ ತೆಗೆದುಕೊಂಡಿಲ್ಲ ಎಂದು ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ದರ್ಶನ್ ಮೈಸೂರಿನಲ್ಲಿ ಇದ್ದು, ಫ್ಯಾಮಿಲಿ ವೈದ್ಯರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ಪಡೆಯುತ್ತಿದ್ದಾರೆ. ಅದರಿಂದ ಯಾವುದೇ ಫಲಿತಾಂಶ ಬಾರದೆ ಹೋದಲ್ಲಿ ಸರ್ಜರಿ ಮಾಡಿಸಿಕೊಳ್ಳಬೇಕಿದೆ. ಅದರ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ದರ್ಶನ್ ಸರ್ಜರಿ ಮಾಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎನ್ನುವ ಕುರಿತಾದ ವರದಿಗಳು ಸುಳ್ಳು ಎಂದು ದಿನಕರ್ ಸ್ಪಷ್ಟಪಡಿಸಿದ್ದಾರೆ.