BIG NEWS: ಸಿ.ಟಿ. ರವಿ ವಿರುದ್ಧ ಮತ್ತೆ ಸಭಾಪತಿಗೆ ದೂರು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಮ್ಮೆ ಸಿ.ಟಿ ರವಿ ವಿರುದ್ಧ ಸಭಾಪತಿ ಅವರಿಗೆ ದೂರು ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಜೊರಟ್ಟಿ, ಲಕ್ಷ್ಮೀ ಹೆಬ್ಬಾಳಕರ್ ಕೊಟ್ಟಿರುವ ದೂರನ್ನು ಸೋಮವಾರ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸಿಟಿ ರವಿ ಇಬ್ಬರೂ ಡಿ. 19ರಂದು ದೂರು ಕೊಟ್ಟಿದ್ದರು. 19ಕ್ಕೆ ಎರಡು ಕಂಪ್ಲೀಟ್ ನೋಡಿ ಅವತ್ತು ನಾನು ತೀರ್ಮಾನ ಮಾಡಿದೆ, ಅಲ್ಲಿಗೆ ನನ್ನ ಕೆಲಸ ಮುಗಿತು. ಆದರೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮತ್ತೊಮ್ಮೆ ದೂರು ನೀಡಿದ್ದಾರೆ.‌ ಸೋಮವಾರ ಮತ್ತು ಮಂಗಳವಾರ ಮತ್ತೊಮ್ಮೆ ವಿಡಿಯೋ ಆಡಿಯೋ ನೋಡುತ್ತೇವೆ. ಎಫ್ ಎಸ್ ಎಲ್ ಗೆ ಕಳುಹಿಸುವ ಹಾಗಿದ್ದರೆ ಕಳುಹಿಸುತ್ತೆವೆ, ನಂತರ ವರದಿ ಬಂದ ನಂತರ ತೀರ್ಮಾನ ಮಾಡುತ್ತೇವೆ ಎಂದರು.

ಸಿಐಡಿಯವರು ಸುವರ್ಣಸೌಧದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೇಳಿದ್ದಾರೆ ಎಂಬ ವಿಚಾರವಾಗಿ, ಸಿಐಡಿಯವರು ಯಾವ ರೀತಿ ಸ್ಥಳ ಮಹಜರು ಮಾಡ್ತಾರೆ ಎಂದು ಹೇಳಲಿ. ಅಲ್ಲೇನು ಕುರ್ಚಿ ಅಥವಾ ಟೇಬಲ್ ಸ್ಥಳ ಮಹಜರು ಮಾಡ್ತಾರಾ? ಅಥವಾ ಸದನಕ್ಕೆ ಕರೆದುಕೊಂಡು ಬಂದು ಮಾಡ್ತಾರಾ? ಈಗ ಸದನ ಅಡ್ಜರ್ನ್ ಆಗಿದೆ, ಸದನದ ಒಳಗಡೆ ಹೊಡೆದಾಟ, ಬಡಿದಾಟ ನಡೆದಿಲ್ಲ. ಹಾಗಾಗಿ ಯಾವ ರೀತಿ ಪಂಚನಾಮೆ ಮಾಡ್ತಾರೆ ಅನೋದನ್ನ ಸಿಐಡಿ ಹೇಳಲಿ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read