ಕಡೂರು: 20 ಲಕ್ಷ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಸುಳ್ಳು ದಾಖಲೆ ನೀಡಿರುವ ನಕಲಿ ಕಟ್ಟಡ ಕಾರ್ಮಿಕರನ್ನು ಅಂಬೇಡ್ಕರ್ ಸೇವಾ ಕೇಂದ್ರದ ಮೂಲಕ ಗುರುತಿಸಿ ಅಂತಹವರ ಕಾರ್ಡುಗಳನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 58 ಲಕ್ಷ ಕಾರ್ಡುಗಳ ಪೈಕಿ 20 ಲಕ್ಷ ಕಾರ್ಡ್ ತೆಗೆದು ಹಾಕಲಾಗಿದೆ ಎಂದ ಸಚಿವರು ಮೊಬೈಲ್ ಮೆಡಿಕಲ್ಸ್ ಯೂನಿಟ್ ಯೋಜನೆಯಡಿ ರಾಜ್ಯದಾದ್ಯಂತ 100 ಆಂಬುಲೆನ್ಸ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ಕನಿಷ್ಠ ಮೂರು ಸ್ಮಾರ್ಟ್ ಆಂಬುಲೆನ್ಸ್ ಸಿಗಲಿದೆ. ಕಾರ್ಮಿಕರ ಮನೆ ಬಾಗಿಲಿಗೆ ತೆರಳಿ ಅವರ ಆರೋಗ್ಯ ತಪಾಸಣೆ ನಡೆಸಿ ಔಷಧ ವಿತರಣೆ ಮಾಡುವ ಗುರಿ ಗೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.