ತನ್ನ ಟೀಸರ್ ಹಾಗೂ ಹಾಡುಗಳಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರಾಜವರ್ಧನ್ ಅಭಿನಯದ ಬಹು ನಿರೀಕ್ಷಿತ ‘ಗಜರಾಮ’ ಚಿತ್ರ ಇದೆ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ಸುನಿಲ್ ಕುಮಾರ್ ವಿ ಎ ನಿರ್ದೇಶನದ ಈ ಚಿತ್ರದಲ್ಲಿ ರಾಜವರ್ಧನ್ ಸೇರಿದಂತೆ ತಪಸ್ವಿನಿ ಪೂಣಚ್ಚ, ದೀಪಕ್, ಕಬೀರ್ ಸಿಂಗ್, ಶರತ್ ಲೋಹಿತಾಸ್ವ ತೆರೆ ಹಂಚಿಕೊಂಡಿದ್ದು, ನಟಿ ರಾಗಿಣಿ ದ್ವಿವೇದಿ ಐಟಂ ಹಾಡೊಂದರಲ್ಲಿ ಹೆಜ್ಜೆ ಹಾಕಿದ್ದಾರೆ. ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ನಲ್ಲಿ ನರಸಿಂಹಮೂರ್ತಿ ವಿ ನಿರ್ಮಾಣ ಮಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದು, ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ರಾಜ್, ಡಿಫರೆಂಟ್ ಡ್ಯಾನಿ, ಟೈಗರ್ ಶಿವು ಅವರ ಸಾಹಸ ನಿರ್ದೇಶನ ಧನಂಜಯ ಬಿ ನೃತ್ಯ ನಿರ್ದೇಶನವಿದೆ.