ಅಹಮದಾಬಾದ್: ಗುಜರಾತ್ ನ ಪೋರ್ ಬಂದರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೇನಾ ಹೆಲಿಕಾಪ್ಟರ್ ಪತನಗೊಂಡು ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ಹೆಲಿಕಾಪ್ಟರ್ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.