HomeKarnatakaಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕ್ಯಾತ ಕಾದಂಬರಿಕಾರ, ಕಥೆಗಾರ ನಾ. ಡಿಸೋಜ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ 7:30ಕ್ಕೆ ನಿಧನರಾಗಿದ್ದಾರೆ.

ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular