ವಿಜಯಪುರ : ನಗರ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ನಗರದ ಹಲವು ಕಡೆ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದು, ಆದಷ್ಟು ಬೇಗ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಜನರು ಒತ್ತಾಯಿಸಿದ್ದಾರೆ.
ನಗರ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಡಿದ್ದು,ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುವ ಸ್ಥಿತಿ ನಿರ್ಮಾವಾಗಿದೆ.