ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
28 ವರ್ಷದ ಶೈಲಜಾ ಅನುಮಾನಾಸ್ಪದವಾಗಿ ಮೃತಪಟ್ಟವರು. ಶೈಲಜಾ ಅವರಿಗೆ ಪತಿ ಮತ್ತು ಅತ್ತೆ ಕಿರುಕುಳ ನೀಡುತ್ತಿದ್ದರು. ಸಾವಿನ ಬಗ್ಗೆ ಅನುಮಾನವಿದ್ದು, ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿ ಸೊರಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.