alex Certify BREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು

ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಲುಪಾರಾ ಬಳಿ ಸರ್ಕಾರಿ ಬಸ್ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ತಮಿಳುನಾಡಿನ ತಂಜಾವೂರಿನಿಂದ ಕೇರಳದ ಅಲಪ್ಪುಳದ ಮಾವೇಲಿಕರಕ್ಕೆ ಹಿಂತಿರುಗುತ್ತಿದ್ದ 34 ಪ್ರಯಾಣಿಕರನ್ನು ಹೊತ್ತ ಬಸ್ ಈ ಅವಘಡಕ್ಕೆ ಸಿಲುಕಿದೆ.

ಮೃತರ ದೇಹಗಳನ್ನು ಮುಂಡಕಯಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೋಸ್ಟ್‌ಮಾರ್ಟಂ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...