ಹೊನ್ನಾವರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ.
ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಸಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಮೃತರನ್ನು ಬಿಹಾರ ರಾಜ್ಯ ಮೂಲದವರಾದ ನಳಂದಾ ಜಿಲ್ಲೆಯ ಸಜ್ಜನ ಕುಮಾರ್, ಗಯಾ ಜಿಲ್ಲೆಯ ಗಣವ್ರಿ ಮತ್ತು ಪಾಟ್ನಾ ಜಿಲ್ಲೆಯ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ.ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಗಾಯಾಳುಗಳಿಗೆ ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.