ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ.
ಘಟನೆಯಲ್ಲಿ ಈವರೆಗೆ ಕನಿಷ್ಠ 9 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು.ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಬಸ್ತಾರ್ ಐಜಿ ಪಿ ಸುಂದರ್ರಾಜ್ ತಿಳಿಸಿದ್ದಾರೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ. ಘಟನೆಯಲ್ಲಿ ಎಂಟು ಜವಾನರು ಮತ್ತು ಚಾಲಕ ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ನಿನ್ನೆ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಕನಿಷ್ಠ 20 ಸೈನಿಕರನ್ನು ವಾಹನವು ಹೊತ್ತೊಯ್ಯುತ್ತಿತ್ತು.
Chhattisgarh | Nine people – eight Dantewada DRG jawans and one driver, lost their lives after their vehicle was blown up by naxals through an IED blast, in Bijapur. They were returning after a joint operation of Dantewada, Narayanpur and Bijapur: IG Bastar pic.twitter.com/hqsDHnr8XT
— ANI (@ANI) January 6, 2025