ಬೆಂಗಳೂರು: ಆಂಧ್ರಪ್ರದೇಶದ ಸಾರಿಗೆ ಸಂಸ್ಥೆ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಟರ್ಮಿನಲ್ ಮೂರರಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಭೂಷಣ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಗೆ ಒರಗಿಕೊಂಡು ಭೂಷಣ್ ನಿಂತಿದ್ದರು. ಇದನ್ನು ಗಮನಿಸದೇ ಚಾಲಕ ಬಸ್ ಚಾಲನೆ ಮಾಡಿ ಮುಂದಕ್ಕೆ ಚಲಿಸಿದ್ದಾನೆ. ಕೆಳಗೆ ಬಿದ್ದ ಭೂಷಣ್ ತಲೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.