HomeEntertainmentBIG NEWS: ಮಾ. 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

BIG NEWS: ಮಾ. 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌ 1ರಿಂದ 8ರ ವರೆಗೆ ನಡೆಯಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಕುರಿತು ನಡೆದ ಸಭೆಯ ಬಳಿಕ ಅವರು ಮಾಹಿತಿ ನೀಡಿದ್ದಾರೆ.

ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು. 2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ 9ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ. ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular