ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರು-ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಎಂಜಿನ್ ಸ್ಥಗಿತಗೊಮ್ಡ ಕಾರಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.
ಕೆಐಎ ನಿಂದ ಭಾನುವಾರ ಸಂಜೆ 7ಗಂಟೆಗೆ 2820 ವಿಮಾನ ಟೇಕಾಫ್ ಆಗಿತ್ತು. ಟೇಕಾಫ್ ಆದ ಕೆಲವೇ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನ ಸಿಬ್ಬಂದಿ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಮಾನ ಒಂದು ಗಂಟೆಕಾಲ ಬೆಂಗಳೂರಿನ ಸುತ್ತ ತಿರುಗಿ ಮತ್ತೆ ಭೂ ಸ್ಪರ್ಶ ಮಾಡಲಾಯಿತು. ಯಾವುದೇ ಅಹಿತಕರ ಘತನೆ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ವಿಮಾನ ತುರ್ತು ಭೂ ಸ್ಪರ್ಶ ಮಾಡಿದ ಬಗ್ಗೆ ಅಧಿಕಾರಿಗಳು ಇಂದು ಮಾಹಿತಿ ನೀಡಿದ್ದಾರೆ.