ತುಮಕೂರು: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸುದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಓಬಳಾಪುರ ಬಳಿ ನಡೆದಿದೆ.
ಮಮ್ತಾಜ್ (38) ಹಾಗೂ ಮಕ್ಕಳಾದ ಮಹಮ್ಮದ್ ಆಸೀಫ್ (12) ಶಾಖಿರ್ ಹುಸೇನ್ (18) ಮೃತರು. ಮಧುಗಿರಿಯ ಗುಡ್ಡೇನಹಳ್ಳಿ ಗ್ರಾಮದ ಮೂವರು ಸಂಬಂಧಿಕರ ಮನೆಗೆಂದು ಹೋಗಿದ್ದರು. ಬೈಕ್ ನಲ್ಲಿ ವಾಪಾಸ್ ಆಗುತ್ತಿದ್ದಾಗ ಇಂದು ಮುಂಜಾನೆ ಬೈಕ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳದಲ್ಲೇ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.