ಚಿಕ್ಕಮಗಳೂರು: ಇಂದು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಯಾಗಲಿದ್ದಾರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿರುವ 6 ನಕ್ಸಲರು ಶರಣಾಗಲಿದ್ದಾರೆ.
ನಕ್ಸಲರ ಶರಣಾಗತಿಯ ಬಗ್ಗೆ ಸರ್ಕಾರ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ. ವಸಂತ ಅಲಿಯಾಸ್ ರಮೇಶ, ಕೇರಳದ ಜೀಶಾನ್, ಆಂಧ್ರಪ್ರದೇಶದ ಮಾರಪ್ಪ ಆರೋಲಿ ಶರಣಾಗತಿ ಫೈನಲ್ ಆಗಿದೆ.
ಈ ಕುರಿತಾಗಿ ನಿನ್ನೆ ಶಾಂತಿಗಾಗಿ ನಾಗರಿಕ ವೇದಿಕೆ ವತಿಯಿಂದ ಜಿಲ್ಲಾಡಳಿತದ ಜೊತೆಗೆ ಮಾತುಕತೆ ನಡೆದಿದ್ದು, ಮಾಜಿ ನಕ್ಸಲರು ಮತ್ತು ಅವರ ಕುಟುಂಬದವರ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಲಿದೆ. ನಕ್ಸಲರ ಶರಣಾಗತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೂಂಬಿಂಗ್ ಸ್ಥಗಿತಗೊಳಿಸಲಾಗಿದೆ.