ಸುನಿಲ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗಜರಾಮ’ ಚಿತ್ರದ ”ಕನಸಲೇ ಕವಿತೆ” ಎಂಬ ಬ್ಯೂಟಿಫುಲ್ ಮೆಲೋಡಿ ಗೀತೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಸೋನು ನಿಗಮ್ ಈ ಹಾಡಿಗೆ ಧ್ವನಿಯಾಗಿದ್ದು, ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಚಿನ್ಮಯ್ ಬಾವಿಕೆರೆ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರದಲ್ಲಿ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಮತ್ತು ತಪಸ್ವಿನಿ ಪೂಣಚ್ಚ ನಾಯಕ, ನಾಯಕಿಯಾಗಿದ್ದು, ದೀಪಕ್, ಕಬೀರ್ ಸಿಂಗ್, ಶರತ್ ಲೋಹಿತಾಸ್ವ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಲೈಫ್ ಲೈನ್ ಫಿಲಂಸ್ ಬ್ಯಾನರ್ ನಲ್ಲಿ ನರಸಿಂಹಮೂರ್ತಿ ವಿ ನಿರ್ಮಾಣ ಮಾಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ, ಟೈಗರ್ ಶಿವು ಅವರ ಸಾಹಸ ನಿರ್ದೇಶನ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.