ಬೆಂಗಳೂರು : ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ.ರಾಕೇಶ್ ಕುಮಾರ್ ಕೆ., ಐಎಎಸ್ (ಕೆ.ಎನ್:2012), ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಸಮಕಾಲೀನ ಉಸ್ತುವಾರಿಯಲ್ಲಿ ಇರಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.