HomeKarnatakaರಾಜ್ಯದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ಟೀಕೆ: ಸಿಎಂ ಸಿದ್ಧರಾಮಯ್ಯ ತಿರುಗೇಟು

ರಾಜ್ಯದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ಟೀಕೆ: ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ಟೀಕಿಸಿದವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್‌ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ? ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು  41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ ಎಂದು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಹೇಳಿದ್ದಾರೆ.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular