ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, ಹುಬ್ಬಳ್ಳಿ –ಧಾರವಾಡ ಬಂದ್ ಗೆ ಕರೆ ನೀಡಲಾಗಿದೆ.
ಇಂದು ದಲಿತ ಪರ ಸಂಘಟನೆಗಳಿಂದ ಬೀದರ್ ತಾಲೂಕು ಬಂದ್ ಗೆ ಕರೆ ನೀಡಲಾಗಿದೆ ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜನವರಿ 9ರಂದು ಬೀದರ್ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬೀದರ್ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಜೆ ಘೋಷಿಸಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ -ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ಕನ್ನಡಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡಿವೆ. ಹುಬ್ಬಳ್ಳಿ, ಧಾರವಾಡದ ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಪೊಲೀಸರಿಂದ ಬಂದೋಬಸ್ತ್ ಕೈಗೊಳ್ಳಲಾಗಿದೆ.