ಬೆಂಗಳೂರು: ಒಟಿಎಸ್ ಯೋಜನೆಯಡಿ ಬಡ್ಡಿ ಮತ್ತು ದಂಡ ಮನ್ನಾ ಮಾಡಿದರೂ ಆಸ್ತಿ ತೆರಿಗೆ ಪಾವತಿಸದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಸೀಜ್ ಮಾಡಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಟಿಎಸ್ ಯೋಜನೆ ಮೂಲಕ ಅಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಬಡ್ಡಿ ಮತ್ತು ದಂಡ ಪಾವತಿ ರಿಯಾಯಿತಿ ನೀಡಲಾಗಿದ್ದರೂ 2 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ತೆರಿಗೆ ಬಾಕಿ ಇರುವ ಕಟ್ಟಡಗಳನ್ನು ಸೀಜ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಕಾಯ್ದೆಗೆ ತಿದ್ದುಪಡಿ ಮಾಡಿಕೊಂಡು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳನ್ನು ಹರಾಜು ಹಾಕಲು ಅವಕಾಶ ಪಡೆದುಕೊಳ್ಳಲಾಗಿದೆ. ಆದರೆ, ಅವಕಾಶ ಇದೆ ಎಂದ ಮಾತ್ರಕ್ಕೆ ಸಣ್ಣ ಪುಟ್ಟ ಬಾಕಿ ಇರುವ ಕಟ್ಟಡಗಳನ್ನು ಹರಾಜು ಹಾಕುವುದಿಲ್ಲ. ದೊಡ್ಡ ಮೊತ್ತದ ಆಸ್ತಿ ತೆರಿಗೆ ಬಾಕಿ ಇರುವ ವಾಣಿಜ್ಯ ಕಟ್ಟಡಗಳನ್ನು ಅಗತ್ಯವಿದ್ದರೆ ಹರಾಜು ಹಾಕಲಾಗುವುದು ಎಂದು ಹೇಳಿದ್ದಾರೆ.