ತಿರುಪತಿ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಯಲ್ಲಿ ನಡೆದ ಕಾಲ್ತುಳಿತ ದುರತದಲ್ಲಿ 6 ಭಕ್ತರು ಸಾವನ್ನಪ್ಪಿದ್ದು, 48 ಜನರು ಗಾಯಗೊಂಡಿದ್ದಾರೆ. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆಗಮಿಸಿದ್ದು, ಟಿಕೆಟ್ ಕೌಂಟರ್ ಬಳಿ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿತ್ತು.
ಕಾಲ್ತುಳಿತದಲ್ಲಿ ಗಾಯಗೊಂಡಿರುವವರ ಪೈಕಿ 32 ಜನರು ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಗಳ ಬಳಿಕ ತಿರುಪತಿಯಲ್ಲಿ ಕೆಲಕಾಲ ಟೋಕನ್ ಕೌಂಟರ್ ಬಂದ್ ಮಾಡಲಾಗಿತ್ತು. ಇದೀಗ ಮತ್ತೆ ಎಂದಿನಂತೆ ಟೊಕನ್ ಕೌಂಟರ್ ಆರಂಭವಾಗಿದೆ.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದು, ಟಿಟಿಡಿ 93 ಕೌಂಟರ್ ಗಳನ್ನು ತೆರೆದಿದೆ. ನಿನ್ನೆಯ ದುರಂತದ ಬಳಿಕ ಇಂದು ಎಂದಿನಂತೆ ಟೋಕನ್ ಕೌಂಟರ್ ಆರಂಭವಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ಬಂದು ಟೋಕನ್ ಪಡೆದುಕೊಳ್ಳುತ್ತಿದ್ದಾರೆ.