ರಾಮನಗರ : ರಾಮನಗರಲ್ಲಿ ಭೀಕರ ಆಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರು ಒಂದೇ ಕುಟುಂಬದರು ಎಂದು ಹೇಳಲಾಗಿದೆ. ರಾಮನಗರದಿಂದ ಕನಕಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.