ಹೊಸಪೇಟೆ: ಕೆಲಸದ ಒತ್ತಡಕ್ಕೆ ಬೇಸತ್ತ ಬಿಲ್ ಕಲೆಕ್ಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲೆಯ ಹೊಸಪೇಟೆಯಲ್ಲಿ ನಡೆದಿದೆ.
ಮಂಜುನಾಥ್ ಆತ್ಮಹತ್ಯೆಗೆ ಶರಣಾದವರು. ಕಡ್ಡಿರಾಂಪುರ ಲಾಡ್ಜ್ ಒಂದರಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಮಂಜುನಾಥ್ ಕೆಲಸದ ಒತ್ತಡವಿದೆ ಎಂದು ಹೊಸ ವರ್ಷದ ಆರಂಭದ ದಿನವೇ ಪ್ಲಂಬಿಂಗ್ ಗೆ ಬಳಸುವ ಗಮ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಚೇತರಿಸಿಕೊಂಡಿದ್ದ ಮಂಜುನಾಥ್ ಈಗ ನೇಣಿಗೆ ಕೊರಳೊಡ್ಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.