ನವದೆಹಲಿ : ಎಫ್ ಡಿ ಎ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ನಿರಾಕರಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್ ಡಿ ಪಾಟೀಲ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ವಿಚಾರಣೆ ನಡೆಸಿದ ನ್ಯಾ ಬಿ ಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿದೆ.
ರಾಜ್ಯಾದ್ಯಂತ 2023 ರ ಅ.28 ರಂದು ಕೆಪಿಎಸ್ ಸಿ ವಿವಿಧ ಇಲಾಖೆಗಳ ಎಫ್ ಡಿ ಎ ಪರೀಕ್ಷೆ ನಡೆಸಿತ್ತು. ಪರೀಕ್ಷೆಯಲ್ಲಿ ಹಲವರು ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದರು. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು, ಹಾಗೂ ಹಲವರನ್ನು ಬಂಧಿಸಲಾಗಿತ್ತು.