ಬೆಂಗಳೂರು : ಶರಣಾಗತರಾದ 6 ಮಂದಿ ನಕ್ಸಲರನ್ನು ಚಿಕ್ಕಮಗಳೂರಿನ ಪೊಲೀಸರು
ಬೆಂಗಳೂರಿನ ಎನ್ ಐಎ (NIA) ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ 6 ಮಂದಿ ನಕ್ಸಲರನ್ನು ಚಿಕ್ಕಮಗಳೂರಿನ ಪೊಲೀಸರು ಬೆಂಗಳೂರಿನ ಎನ್ ಐಎ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಂತರ ಕೋರ್ಟ್ ನಕ್ಸಲರ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ.
ಕರ್ನಾಟಕದ ಇತಿಹಾಸದಲ್ಲಿಯೇ ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ 6 ನಕ್ಸಲರು ನಿನ್ನೆ ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ಶರಣಾಗತರಾಗಿದ್ದಾರೆ.
ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾದ ನಕ್ಸಲರು.