ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿ ಮಠ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಅವರು ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿಯ ಮೇಲೆ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾದ ಆನಂದ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿ ನಾಲ್ವರ ವಿರುದ್ಧ ಬಾಗಲಕೋಟೆ ಶಹರ ಪೊಲೀಸ್ ಠಾಣೆಗೆ ಆನಂದ ಮುತ್ತಗಿ ದೂರು ನೀಡಿದ್ದಾರೆ. ವೀರಣ್ಣ ಚರಂತಿಮಠ ಅಧ್ಯಕ್ಷರಾಗಿರುವ ಬೀಳೂರು ಸಹಕಾರ ಸಂಘದಿಂದ 35 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದ ಆನಂದ ಮುತ್ತಗಿ 2018 ರಿಂದಲೂ ಸಾಲ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಸಾಲದ ಹಣ ಕಟ್ಟದಿರುವುದಕ್ಕೆ ವೀರಣ್ಣ ಚರಂತಿಮಠ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.