ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್ ಗಾರ್ಡನ್ ನಲ್ಲಿರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವ ಪತ್ತೆಯಾಗಿವೆ.
ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಒಳಗೊಂಡ ಕುಟುಂಬವನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ, ಆದಾಗ್ಯೂ, ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣವನ್ನು ದೃಢಪಡಿಸಲಾಗುವುದು ಎಂದು ಮೀರತ್‌ನ ಎಸ್‌ಎಸ್‌ಪಿ ತಿಳಿಸಿದ್ದಾರೆ.
ಪತಿ ಮೊಯಿನ್ ಮತ್ತು ಪತ್ನಿ ಅಸ್ಮಾ ಅವರ ಶವಗಳು ನೆಲದ ಮೇಲೆ ಪತ್ತೆಯಾಗಿದ್ದು, ಅವರ ಮಕ್ಕಳಾದ 8 ವರ್ಷದ ಅಫ್ಸಾ, 4 ವರ್ಷದ ಅಜೀಜಾ ಮತ್ತು 1 ವರ್ಷದ ಅದಿಬಾ ಅವರ ಶವಗಳನ್ನು ಹಾಸಿಗೆಯೊಳಗೆ ಮರೆಮಾಡಲಾಗಿತ್ತು.