ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡ ಸುರಕ್ಷತೆ ಪ್ರಮಾಣ ಪತ್ರ, ನಕ್ಷೆ ಅನುಮೋದನೆ, ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವೆಂದು ತಿಳಿಸಿದೆ.
ಮಾನ್ಯತೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಖಾಸಗಿ ಶಾಲೆಗಳು ಕಡ್ಡಾಯವಾಗಿ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸುವಂತೆ ಷರತ್ತು ವಿಧಿಸಿ ಶಿಕ್ಷಣ ಇಲಾಖೆ 2022ರ ಜೂನ್ 6ರಂದು ಸುತ್ತೋಲೆ ಹೊರಡಿಸಿದ್ದು, ಇದನ್ನು ರದ್ದುಪಡಿಸುವಂತೆ ಕೋರಿ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ್ ಅರಸ್ ಸೇರಿದಂತೆ ಅನೇಕ ಶಾಲೆಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದವು.
ಸರ್ಕಾರದ ಸುತ್ತೋಲೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಎತ್ತಿ ಹಿಡಿದಿದ್ದು ಖಾಸಗಿ ಶಾಲೆ ಮಾನ್ಯತೆ ನವೀಕರಣಕ್ಕೆ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯವೆಂದು ಹೇಳಿದೆ.