ಬೆಂಗಳೂರು: ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷೆಸಲಾಗಿದೆ. ಇದನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.