alex Certify ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ವರ್ಷಾಚರಣೆ: ನಾಳೆಯಿಂದ ಮೂರು ದಿನ ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ವರ್ಷಾಚರಣೆ: ನಾಳೆಯಿಂದ ಮೂರು ದಿನ ವಿಶೇಷ ಪೂಜೆ

ಅಯೋಧ್ಯೆ: ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಈ ವೇಳೆ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿದೆ.

ಈ ಬಾರಿ ಗಣ್ಯ ವ್ಯಕ್ತಿಗಳ ಜೊತೆಗೆ ಜನಸಾಮಾನ್ಯರನ್ನು ಗುರುತಿಸಿ ಆಹ್ವಾನ ನೀಡಲಾಗಿದೆ. ಕಳೆದ ವರ್ಷ ಜನವರಿ 22ರಂದು ಐತಿಹಾಸಿಕ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಆಹ್ವಾನಿತ 110 ಗಣ್ಯರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದೆ. ಗಣ್ಯರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಗಣೀರ ಜೊತೆಗೆ ಜನಸಾಮಾನ್ಯರು ಕೂಡ ಭಾಗವಹಿಸಲಿದ್ದಾರೆ.

ಅಂಗಲ್ ಟೀಲಾ ಜಾಗದಲ್ಲಿ ಜರ್ಮನ್ ಟೆಂಟ್ ನಿರ್ಮಿಸಲಾಗಿದ್ದು, 5000 ಜನ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಮೂರು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...