ಕಲಬುರಗಿ: ನ್ಯಾಯಾಲಯದ ಆವರಣದಲ್ಲಿಯೇ ಯುವಕನ ಮೇಲೆ ಮೂವರು ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಘಟನೆ ನಡೆದಿದೆ.
ಯಾತನೂರು ಗ್ರಾಮದ ನಿವಾಸಿ ದೇವೇಂದ್ರ(27) ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಸಿದ್ದು, ಶಿವಲಿಂಗಪ್ಪ ಮತ್ತು ಶ್ರೀಶೈಲ ಎಂಬುವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಗಾಯಗೊಂಡಿರುವ ದೇವೇಂದ್ರ ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.