ಹಾಸನ: ಇತ್ತೀಚಿನ ದಿನಗಳಲ್ಲಿ ಚಲಿಸುತ್ತಿದ್ದ ಬೈಕ್, ಕಾರು, ಬಸ್ ಗಳಲ್ಲಿ ಬೆಂಕಿ ಅವಘಡ ಸಂಭವಿಸುತ್ತಿರುವ ಘಟನೆ ಹೆಚ್ಚುತ್ತಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡೇಗರ್ಜೆ ಬಳಿ ನಡೆದಿದೆ.
ಕಡೇಗರ್ಜೆ ಬಳಿ ಬರುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಕಾರಿನಿಂದ ಇಳಿದು ಬಚವ್ ಆಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಕಾರು ಡಾ.ಶೇಷಾದ್ರಿ ಎಂಬುವವರಿಗೆಸೇಇದ ಕಿಯಾ ಕಾರು ಇದಾಗಿದ್ದು, ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.