ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲೆಂದು ತೆರಳಿದ್ದ 6 ಭಕ್ತರು ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ವೇಳೆ 42 ಭಕ್ತರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದ್ದು, 35 ಭಕ್ತರು ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಗಾಯಾಳು ಭಕ್ತರಿಗೆ ಟಿಟಿಡಿ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಈ ಹಿನ್ನೆಲೆಯಲ್ಲಿ 35 ಭಕ್ತರು ವೈಕುಂಠ ದ್ವಾರ ದರ್ಶನ ಪಡೆದಿದ್ದಾರೆ.
ತಿರುಪತಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಕಾಲ್ತುಳಿತ ದುರಂತದ ಬಳಿಕ ಆಂಧ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕಟ್ಟೆಚ್ಚರ ವಹಿಸಿದೆ. ಅಲ್ಲದೇ ತಿರುಪತಿ ತಿರುಮಲ ಆಡಳಿತ ಮಂಡಳಿ ಕೂಡ ಯಾವುದೇ ಅವಘಡ ಸಂಭವಿಸದಂತೆ ಮುಂನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತ ಸಾಗರವೇ ಹರಿದು ಬಂದಿದ್ದು, ವೈಕುಂಠ ದ್ವಾರ ದರ್ಶನಕ್ಕೆ, ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಯಾವುದೇ ಅಡೆತಡೆಯಾಗದಂತೆ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ.
ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡು ಗುಣಮುಖರಾಗಿದ್ದ 35 ಭಕ್ತರು ಇಂದು ವೈಕುಂಠ ಏಕಾದಶಿ ಹಿನ್ನೆಯಲ್ಲಿ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಪಡೆದಿದ್ದಾರೆ.