ಬೆಂಗಳೂರು: ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ, ಹೊರ ರಾಜ್ಯದ ದೇವಾಲಯಗಳಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯದ ದೇವಸ್ಥಾನಗಳಿಗೆ ಭೇತಿ ನೀಡಿ, ಪೂಜೆ ಸಲ್ಲಿಸಲು ಒಂದು ತಿಂಗಳ ಕಾಲವಕಾಶ ನಿಡುವಂತೆ ಕೋರಿದರು.
ಈ ಬಗ್ಗೆ ಸರ್ಕಾರಿ ಪರ ವಕೀಲರು ಆಕ್ಷೇಪ ಸಲ್ಲಿಸುವ ಸಾಧ್ಯತೆ ಇದ್ದು, ವಾದ-ಪ್ರತಿವಾದದ ಬಳಿಕ ಕೋರ್ಟ್ ಏನು ಆದೇಶ ನೀಡಲಿದೆ? ಕಾದುನೋಡಬೇಕಿದೆ.