ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.
ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದ್ದು, ಈ ವೇಳೆ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸಾಕ್ಷಿಗಳ ಹೇಳಿಕೆ ಉಲ್ಲೇಖಿಸಿ ವಾದ ಮಂಡಿಸಿದರು. ದೂರುದಾರ ಮಹಿಳೆಯ ವಿಡಿಯೋದಲ್ಲಿ ಬಿಎಸ್ ವೈ ಹೇಳಿಕೆ ಪ್ರಸ್ತಾಪವಿದೆ, ಚೆಕ್ ಮಾಡಿದ್ದೇನೆ ಎಂಬ ಹೇಳಿಕೆಗೆ ಬಾಲಕಿಯ ಹಿನ್ನೆಲೆಯನ್ನು ಚೆಕ್ ಮಾಡಿದ್ದರೆಂದು ಸ್ಪಷ್ಟನೆ ನೀಡಿದ್ದಾರೆ.
ವಾದ ಆಲಿಸಿದ ಹೈಕೋರ್ಟ್ ಜನವರಿ 15ಕ್ಕೆ ವಿಚಾರಣೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.