ಅಹಮದಾಬಾದ್: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. 8 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಶಾಲೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ಎಂದಿನಂತೆ ಬೆಳಿಗ್ಗೆ ಶಾಲೆಗೆ ಬಂದಿದ್ದ ಬಾಲಕಿ ಶಾಲೆಯ ಕಾರಿಡಾರ್ ನಲ್ಲಿ ನಡೆದು ಹೋಗುವಾಗ ಹೃದಯಾಘಾತಕ್ಕೀಡಾಗಿದ್ದಾಳೆ. ಏಕಾಏಕಿ ಬಾಲಕಿ ಎದೆ ಹಿಡಿದುಕೊಂಡು ಕುಸಿದುಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಬಾಲಕಿ ಇದ್ದಕ್ಕಿದ್ದಂತೆ ಶಾಲೆಯ ಕಾರಿಡಾರ್ ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.