HomeKarnatakaBREAKING : ಗುತ್ತಿಗೆದಾರ 'ಸಚಿನ್' ಆತ್ಮಹತ್ಯೆ ಕೇಸ್ : ರಾಜು ಕಪನೂರ್ & ಗ್ಯಾಂಗ್ 5...

BREAKING : ಗುತ್ತಿಗೆದಾರ ‘ಸಚಿನ್’ ಆತ್ಮಹತ್ಯೆ ಕೇಸ್ : ರಾಜು ಕಪನೂರ್ & ಗ್ಯಾಂಗ್ 5 ದಿನ ‘CID’ ಕಸ್ಟಡಿಗೆ.!

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಬಂಧಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಪೊಲೀಸರು 5 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ 8 ಜನರಿಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಬೀದರ್ ರೈಲ್ವೆ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಐವರನ್ನು ಬಂಧಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜು ಕಪನೂರ್, ನಂದಕುಮಾರ್, ಘೋರಕನಾಥ್, ರಾಮನಗೌಡ ಹಾಗೂ ಸತೀಶ್ ಬಂಧಿತರು. ಡಿ.26ರಂದು ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ನಲ್ಲಿ 8 ಜನರ ವಿರುದ್ಧ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು 8 ಜನರಿಗೆ ನೋಟಿಸ್ ನೀಡಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular