alex Certify ಪೋಷಕರೇ ಗಮನಿಸಿ : ಏಕಲವ್ಯ ಶಾಲೆಯ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ಏಕಲವ್ಯ ಶಾಲೆಯ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ.!

ಏಕಲವ್ಯ ಶಾಲೆಯ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವೇಳಾಪಟ್ಟಿ ಅನುಸಾರ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸಬಹುದಾಗಿದೆ.

ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ಪಠ್ಯಕ್ರವನ್ನು ಹೊಂದಿರುವ ಏಕಲವ್ಯ ಮಾದರಿ ವಸತಿ ಶಾಲೆ, ಕೊಳಗಲ್ಲು, ಬಳ್ಳಾರಿ ತಾಲೂಕು, ಬಳ್ಳಾರಿ ಜಿಲ್ಲೆ ಇಲ್ಲಿನ 6ನೇ ತರಗತಿಗೆ 2025-26ನೇ ಸಾಲಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಈ ಸಂಬಂಧ ಅರ್ಜಿಯನ್ನು ಸಲ್ಲಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಪ್ರಕಟಣೆಯಲ್ಲಿ ತಿಳಿಸಿರುವ ವಿವಿಧ ವರ್ಗಗಳ 5ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶಾತಿಯು ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಂಘ, ನವದೆಹಲಿಯವರು ರೂಪಿಸಿರುವ ನಿಯಮಗಳಿಗೆ ಬದ್ಧವಾಗಿದ್ದು, ಪ್ರವೇಶಾತಿ ಪರೀಕ್ಷೆಯ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶಾತಿಯನ್ನು ಕಲ್ಪಿಸಲಾಗುತ್ತಿದೆ.

ಪ್ರವೇಶಾತಿ ಪರೀಕ್ಷೆಯ ವೇಳಾಪಟ್ಟಿ

* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :
02-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
31-01-2025
ಪ್ರವೇಶಾತಿ ಪರೀಕ್ಷೆಗಾಗಿ ಪ್ರವೇಶ ಪತ್ರದ ಬಿಡುಗಡೆ ದಿನಾಂಕ :
17-02-2025
ಪ್ರವೇಶಾತಿ ಪರೀಕ್ಷೆ ದಿನಾಂಕ:
28-02-2025
ಫಲಿತಾಂಶ ಹಾಗೂ ಆಯ್ಕೆ ಪಟ್ಟಿಗಳ ಬಿಡುಗಡೆ ದಿನಾಂಕ :
10-03-20250

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...