ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ಪೊಲೀಸರು ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.
ಕಲಬುರಗಿ ಹೊರವಲಯದ ತಾವರಗೇರಾ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಡ್ರಗ್ಸ್ ಸಾಗಿಸುತ್ತಿದ್ದ ಸುಪ್ರೀತ್ ನವಲೆ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕಾರಿನಲ್ಲಿ ತಪಾಸಣೆ ಮಾಡುವಾಗ ಸುಪ್ರೀತ್ ನವಲೆ ಚಾಕುವಿನಿಂದ ಇರಿದು ಪೊಲೀಸರ ಮೇಲೆ ಹಲ್ಲೆಗೆ ನಡೆಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ರಾಘವೇಂದ್ರ ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾನೆ. ಗಾಯಗೊಂಡ ಸುಪ್ರೀತ್ ನನ್ನು ವಶಕ್ಕೆ ಪಡೆದ ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.