ಬೆಂಗಳೂರು : ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ .
ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ .
ಗ್ಯಾರಂಟಿ ಯೋಜನೆಗಳು ಪ್ರಮುಖ ವಲಯಗಳ ಹೂಡಿಕೆಯನ್ನು ಕಸಿಯುತ್ತಿದೆ ಎಂಬುದು ಶುದ್ಧ ಸುಳ್ಳು ವಾಸ್ತವವಾಗಿ ಬಡತನ ಮತ್ತು ಅಸಮಾನತೆಯನ್ನು ನಿರ್ಮೂಲನೆ ಮಾಡಿ, ದೀರ್ಘಾವಧಿಯ ಅಭಿವೃದ್ಧಿಗೆ ಅಡಿಪಾಯವನ್ನು ಹಾಕಿಕೊಳ್ಳಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ. ಯಾರದ್ದೋ ಪಾಲಾಗಿದ್ದ ಸಾವಿರಾರು ಎಕರೆ ಮುಜರಾಯಿ ದೇವಾಲಯಗಳ ಭೂಮಿಯನ್ನು ಮತ್ತೆ ದೇವಾಲಯಗಳ ಹೆಸರಿಗೆ ಖಾತೆ ಮಾಡಿಕೊಡುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಹಿಂದೂ ವಿರೋಧಿ ಸರ್ಕಾರ ಎನ್ನುವ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಎಷ್ಟು ಎಕರೆ ದೇವಾಲಯಗಳ ಭೂಮಿಯನ್ನು ರಕ್ಷಣೆ ಮಾಡಿದ್ದಾರೆ. ನಿಜವಾದ ಧರ್ಮ ರಕ್ಷಣೆಯ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ. pic.twitter.com/OMvO0hpCNa
— Siddaramaiah (@siddaramaiah) January 10, 2025